Mark - Chapter 1
Holy Bible

1 : ದೇವರ ಪುತ್ರರಾದ ಯೇಸುಕ್ರಿಸ್ತರ ಶುಭಸಂದೇಶ. ಇದು ಪ್ರವಾದಿ ಯೆಶಾಯನು ಮೊದಲೇ ಬರೆದಿಟ್ಟ ಪ್ರಕಾರ ಪ್ರಾರಂಭವಾಯಿತು.
2 : “ಇಗೋ, ನನ್ನ ದೂತನನ್ನು ನಿನಗೆ ಮುಂದಾಗಿ ಕಳಿಸುವೆನು ಆತನು ನಿನ್ನ ಮಾರ್ಗವನ್ನು ಮುಂಚಿತವಾಗಿ ಸಿದ್ಧಗೊಳಿಸುವನು,’ ಎಂದು ದೇವರೇ ನುಡಿದಿದ್ದಾರೆ.”
3 : “ ‘ಸರ್ವೇಶ್ವರನಿಗಾಗಿ ಮಾರ್ಗವನ್ನು ಸಿದ್ಧಪಡಿಸಿರಿ; ಆತನ ಆಗಮನಕ್ಕಾಗಿ ಹಾದಿಯನ್ನು ಸರಾಗಮಾಡಿರಿ,’ ಎಂದೊಬ್ಬನು ಘೋಷಿಸುತ್ತಿದ್ದಾನೆ, ಬೆಂಗಾಡಿನಲ್ಲಿ.”
4 : ಈ ಪ್ರವಾದನೆಗೆ ಅನುಗುಣವಾಗಿ ಯೊವಾನ್ನನು, “ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿ ದೇವರಿಗೆ ಅಭಿಮುಖರಾಗಿರಿ; ಸ್ನಾನದೀಕ್ಷೆಯನ್ನು ಪಡೆದುಕೊಳ್ಳಿ. ದೇವರು ನಿಮ್ಮ ಪಾಪಗಳನ್ನು ಕ್ಷಮಿಸಿಬಿಡುವರು,” ಎಂದು ಬೆಂಗಾಡಿನಲ್ಲಿ ಜನರಿಗೆ ಸಾರಿ ಹೇಳುತ್ತಾ ಸ್ನಾನದೀಕ್ಷೆ ಕೊಡುತ್ತಾ ಇದ್ದನು
5 : ಜುದೇಯ ಪ್ರಾಂತ್ಯದ ಎಲ್ಲೆಡೆಗಳಿಂದಲೂ ಜೆರುಸಲೇಮಿನಿಂದಲೂ ಜನರು ಆತನ ಬಳಿಗೆ ಹೋಗುತ್ತಿದ್ದರು. ಅವರು ತಮ್ಮ ಪಾಪಗಳನ್ನು ಒಪ್ಪಿಕೊಳ್ಳುತ್ತಾ ಜೋರ್ಡನ್ ನದಿಯಲ್ಲಿ ಆತನಿಂದ ಸ್ನಾನದೀಕ್ಷೆ ಪಡೆದುಕೊಳ್ಳುತ್ತಿದ್ದರು
6 : ಯೊವಾನ್ನನು ಒಂಟೆಯ ತುಪ್ಪಟದ ಹೊದಿಕೆಯನ್ನು ಹೊದ್ದು, ಸೊಂಟಕ್ಕೆ ತೊಗಲಿನ ನಡುಪಟ್ಟಿಯನ್ನು ಕಟ್ಟಿಕೊಳ್ಳುತ್ತಿದ್ದನು. ಮಿಡತೆಗಳೂ ಕಾಡುಜೇನೂ ಆತನ ಆಹಾರವಾಗಿತ್ತು
7 : ಆತನು, “ನನ್ನಾನಂತರ ನನಗಿಂತಲೂ ಶಕ್ತರೊಬ್ಬರು ಬರುತ್ತಾರೆ; ಬಗ್ಗಿ ಅವರ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ನಾನು ಅರ್ಹನಲ್ಲ
8 : ನಾನು ನಿಮಗೆ ನೀರಿನಿಂದ ಸ್ನಾನದೀಕ್ಷೆ ಕೊಟ್ಟೆನು; ಅವರಾದರೋ ನಿಮಗೆ ಪವಿತ್ರಾತ್ಮ ಅವರಿಂದ ದೀಕ್ಷಾಸ್ನಾನ ಕೊಡುವರು,” ಎಂದು ಘೋಷಿಸುತ್ತಿದ್ದನು. ಯೇಸು ಪಡೆದ ದೀಕ್ಷಾಸ್ನಾನ (ಮಾರ್ಕ 3.13-4.11; ಲೂಕ 3.21-22, 4.1-13)
9 : ಹೀಗಿರುವಲ್ಲಿ, ಒಂದು ದಿನ ಯೇಸುಸ್ವಾಮಿ ಗಲಿಲೇಯ ಪ್ರಾಂತ್ಯದ ನಜರೇತ್ ಎಂಬ ಊರಿನಿಂದ ಬಂದು, ಜೋರ್ಡನ್ ನದಿಯಲ್ಲಿ ಯೊವಾನ್ನನಿಂದ ದೀಕ್ಷಾಸ್ನಾನ ಪಡೆದುಕೊಂಡರು
10 : ನೀರಿನಿಂದ ಅವರು ಮೇಲಕ್ಕೆ ಬರುತ್ತಿರುವಾಗಲೇ ಆಕಾಶವು ತೆರೆದು, ಪವಿತ್ರಾತ್ಮ ಪಾರಿವಾಳದ ರೂಪದಲ್ಲಿ ತಮ್ಮ ಮೇಲೆ ಇಳಿಯುತ್ತಿರುವುದನ್ನು ಕಂಡರು
11 : ಇದಲ್ಲದೆ, “ನೀನೇ ನನ್ನ ಪುತ್ರ, ನನಗೆ ಪರಮ ಪ್ರಿಯನು; ನನ್ನ ಅಪಾರ ಮೆಚ್ಚುಗೆಗೆ ಪಾತ್ರನು,” ಎನ್ನುವ ದೈವವಾಣಿ ಕೇಳಿಸಿತು. ಸೈತಾನನ ಸೋಲು (ಮಾರ್ಕ 4.1-11; ಲೂಕ 4.1-13)
12 : ಅನಂತರ ಯೇಸುಸ್ವಾಮಿಯನ್ನು ಪವಿತ್ರಾತ್ಮ ಬೆಂಗಾಡಿಗೆ ಕರೆದೊಯ್ದರು. 13ವನ್ಯ ಮೃಗಗಳಿದ್ದ ಆ ಕಾಡಿನಲ್ಲಿ ಯೇಸು ನಾಲ್ವತ್ತು ದಿನಗಳನ್ನು ಕಳೆದರು. ಆ ಅವಧಿಯಲ್ಲಿ ಸೈತಾನನು ಅವರನ್ನು ಪರಿಶೋಧಿಸಲು ಪ್ರಯತ್ನಿಸಿದನು. ದೇವದೂತರು ಅವರನ್ನು ಉಪಚರಿಸಿದರು. ಗಲಿಲೇಯದಲ್ಲಿ ಪ್ರಬೋಧನೆ (ಮತ್ತಾ 4.12-17; ಲೂಕ 4.14-15)
13 : ವನ್ಯ ಮೃಗಗಳಿದ್ದ ಆ ಕಾಡಿನಲ್ಲಿ ಯೇಸು ನಾಲ್ವತ್ತು ದಿನಗಳನ್ನು ಕಳೆದರು. ಆ ಅವಧಿಯಲ್ಲಿ ಸೈತಾನನು ಅವರನ್ನು ಪರಿಶೋಧಿಸಲು ಪ್ರಯತ್ನಿಸಿದನು. ದೇವದೂತರು ಅವರನ್ನು ಉಪಚರಿಸಿದರು. ಗಲಿಲೇಯದಲ್ಲಿ ಪ್ರಬೋಧನೆ (ಮತ್ತಾ 4.12-17; ಲೂಕ 4.14-15)
14 : ಯೊವಾನ್ನನು ಬಂಧಿತನಾದ ಬಳಿಕ ಯೇಸುಸ್ವಾಮಿ ಗಲಿಲೇಯಕ್ಕೆ ಹೋಗಿ ದೇವರ ಶುಭಸಂದೇಶವನ್ನು ಸಾರಿದರು:
15 : “ಕಾಲವು ಪರಿಪಕ್ವವಾಗಿದೆ, ದೇವರ ಸಾಮ್ರಾಜ್ಯವು ಸಮೀಪಿಸಿದೆ; ಪಶ್ಚಾತ್ತಾಪಪಟ್ಟು ಪಾಪಜೀವನಕ್ಕೆ ವಿಮುಖರಾಗಿ ದೇವರಿಗೆ ಅಭಿಮುಖರಾಗಿರಿ, ಶುಭಸಂದೇಶದಲ್ಲಿ ವಿಶ್ವಾಸವಿಡಿ,” ಎಂದು ಘೋಷಿಸಿದರು. ಪ್ರಥಮ ಶಿಷ್ಯರ ಆಯ್ಕೆ (ಮತ್ತಾ 4.18-22; ಲೂಕ 5.1-11)
16 : ಯೇಸುಸ್ವಾಮಿ ಗಲಿಲೇಯ ಸರೋವರದ ತೀರದಲ್ಲಿ ನಡೆದು ಹೋಗುತ್ತಿದ್ದಾಗ ಸಿಮೋನನನ್ನೂ ಆತನ ಸಹೋದರ ಅಂದ್ರೆಯನನ್ನೂ ಕಂಡರು. ಬೆಸ್ತರಾದ ಇವರು ಸರೋವರದಲ್ಲಿ ಬಲೆಬೀಸುತ್ತಾ ಇದ್ದರು.
17 : ಯೇಸು ಅವರಿಗೆ, “ನನ್ನನ್ನು ಹಿಂಬಾಲಿಸಿ ಬನ್ನಿ, ನಿಮ್ಮನ್ನು ಮನುಷ್ಯರನ್ನೇ ಹಿಡಿಯುವವರನ್ನಾಗಿ ಮಾಡುವೆನು,” ಎಂದು ಕರೆದರು.
18 : ತಕ್ಷಣವೇ ಅವರು ತಮ್ಮ ಬಲೆಗಳನ್ನು ಬಿಟ್ಟು ಯೇಸುವನ್ನು ಹಿಂಬಾಲಿಸಿದರು.
19 : ಇನ್ನೂ ಸ್ವಲ್ಪ ಮುಂದಕ್ಕೆ ಹೋಗುತ್ತಿದ್ದಾಗ, ಜೆಬೆದಾಯನ ಮಕ್ಕಳಾದ ಯಕೋಬ ಮತ್ತು ಯೊವಾನ್ನರನ್ನು ಯೇಸು ಕಂಡರು.
20 : ಅವರು ದೋಣಿಯಲ್ಲಿ ಕುಳಿತು ತಮ್ಮ ಬಲೆಗಳನ್ನು ಸರಿಪಡಿಸುತ್ತಿದ್ದರು. ಕೂಡಲೇ, ಯೇಸು ಅವರನ್ನು ಕರೆದರು. ಅವರೂ ತಮ್ಮ ತಂದೆ ಜೆಬೆದಾಯನನ್ನು ಕೂಲಿಯಾಳುಗಳ ಸಂಗಡ ದೋಣಿಯಲ್ಲೇ ಬಿಟ್ಟು ಯೇಸುವನ್ನು ಹಿಂಬಾಲಿಸಿದರು. ದೆವ್ವಗಳ ಉಚ್ಚಾಟನೆ (ಲೂಕ 4.31-37)
21 : ಬಳಿಕ ಅವರೆಲ್ಲರೂ ಕಫೆರ್ನವುಮ್ ಎಂಬ ಊರನ್ನು ಸೇರಿದರು. ಸಬ್ಬತ್‍ದಿನ ಬಂದ ಕೂಡಲೇ ಯೇಸುಸ್ವಾಮಿ ಪ್ರಾರ್ಥನಾಮಂದಿರಕ್ಕೆ ಹೋಗಿ ಬೋಧಿಸತೊಡಗಿದರು. ಅವರ ಉಪದೇಶವನ್ನು ಕೇಳಿ ಜನರು ಬೆರಗಾದರು.
22 : ಏಕೆಂದರೆ ಯೇಸು, ಧರ್ಮಶಾಸ್ತ್ರಿಗಳಂತೆ ಬೋಧಿಸದೆ ಅಧಿಕಾರ ವಾಣಿಯಿಂದ ಪ್ರಬೋಧಿಸುತ್ತಿದ್ದರು. ಅಲ್ಲಿ ದೆವ್ವ ಹಿಡಿದ ಒಬ್ಬನಿದ್ದನು.
23 : ಅವನು, “ನಜರೇತಿನ ಯೇಸುವೇ, ನಿಮಗೇಕೆ ನಮ್ಮ ಗೊಡವೆ? ನೀವು ನಮ್ಮ ವಿನಾಶಕ್ಕಾಗಿ ಬಂದವರೇನು?
24 : ನೀವು ಯಾರೆಂದು ನನಗೆ ಗೊತ್ತು. ದೇವರಿಂದ ಬಂದ ಪರಮಪೂಜ್ಯರು ನೀವು,” ಎಂದು ಕಿರುಚಿದನು. ಆದರೆ ಯೇಸುಸ್ವಾಮಿ ಅವನನ್ನು ಗದರಿಸಿ, “ಸುಮ್ಮನಿರು, ಇವನನ್ನು ಬಿಟ್ಟು ತೊಲಗು,” ಎಂದು ಆ ದೆವ್ವಕ್ಕೆ ಆಜ್ಞಾಪಿಸಿದರು.
25 : ದೆವ್ವವು ಆ ಮನುಷ್ಯನನ್ನು ಒದ್ದಾಡಿಸಿ, ಗಟ್ಟಿಯಾಗಿ ಚೀರುತ್ತಾ ಅವನನ್ನು ಬಿಟ್ಟು ಹೋಯಿತು.
26 : ಜನರೆಲ್ಲರೂ ಆಶ್ಚರ್ಯಚಕಿತರಾದರು.
27 : “ಇದೇನು ಹೊಸ ಬೋಧನೆ!? ಈತ ದೆವ್ವಗಳಿಗೆ ಕೂಡ ಅಧಿಕಾರದಿಂದ ಆಜ್ಞಾಪಿಸುತ್ತಾನೆ; ಅವು ಈತ ಹೇಳಿದ ಹಾಗೆ ಕೇಳುತ್ತವೆಯಲ್ಲ!” ಎಂದು ಪರಸ್ಪರ ಮಾತಾಡಿಕೊಂಡರು.
28 : ಕೂಡಲೇ ಗಲಿಲೇಯ ಪ್ರಾಂತ್ಯದ ಎಲ್ಲೆಡೆಗೂ ಯೇಸುವಿನ ಸಮಾಚಾರ ಹಬ್ಬಿ ಹರಡಿತು. ರೋಗಿಗಳಿಗೆ ಆರೋಗ್ಯದಾನ (ಮತ್ತಾ. 8.14-17; ಲೂಕ 4.38-41)
29 : ಯೇಸುಸ್ವಾಮಿ ಪ್ರಾರ್ಥನಾ ಮಂದಿರದಿಂದ ಹೊರಟು ಯಕೋಬ ಮತ್ತು ಯೊವಾನ್ನನ ಸಂಗಡ ಸಿಮೋನ ಹಾಗೂ ಅಂದ್ರೆಯನ ಮನೆಗೆ ಹೋದರು.
30 : ಸಿಮೋನನ ಅತ್ತೆ ಜ್ವರದಿಂದ ಮಲಗಿದ್ದಳು. ಇದನ್ನು ಯೇಸುವಿಗೆ ತಿಳಿಸಿದರು. ಯೇಸು ಆಕೆಯ ಬಳಿಗೆ ಹೋಗಿ ಕೈಹಿಡಿದು ಎಬ್ಬಿಸಿದರು. ಜ್ವರ ಬಿಟ್ಟುಹೋಯಿತು.
31 : ಆಕೆ ಅವರೆಲ್ಲರನ್ನು ಸತ್ಕರಿಸಿದಳು.
32 : ಸಂಜೆ ಸೂರ್ಯ ಮುಳುಗಿದ ಮೇಲೆ ಜನರು ರೋಗಿಗಳನ್ನೂ ದೆವ್ವಹಿಡಿದವರನ್ನೂ ಯೇಸುವಿನ ಬಳಿಗೆ ಕರೆತಂದರು.
33 : ಊರಿಗೆ ಊರೇ ಆ ಮನೆಯ ಬಾಗಿಲಲ್ಲಿ ನೆರೆಯಿತು.
34 : ನಾನಾ ರೋಗಗಳಿಂದ ನರಳುತ್ತಿದ್ದವರನ್ನು ಯೇಸು ಗುಣಪಡಿಸಿದರು. ದೆವ್ವ ಹಿಡಿದವರಿಂದ ದೆವ್ವ ಬಿಡಿಸಿದರು. ತಾವು ಯಾರೆಂಬುದನ್ನು ದೆವ್ವಗಳು ಅರಿತಿದ್ದುದರಿಂದ ಯೇಸು ಅವುಗಳಿಗೆ ಮಾತನಾಡಲು ಅವಕಾಶಕೊಡಲಿಲ್ಲ. ಸವಿಸ್ತಾರ ಸೇವೆ (ಲೂಕ 4.42-44)
35 : ಮುಂಜಾನೆ ಬೆಳಕು ಹರಿಯುವ ಮುನ್ನ ಯೇಸುಸ್ವಾಮಿ ಎದ್ದು ಏಕಾಂತ ಪ್ರದೇಶಕ್ಕೆ ಹೋಗಿ ಪ್ರಾರ್ಥನೆ ಮಾಡುತ್ತಿದ್ದರು.
36 : ಇತ್ತ, ಸಿಮೋನನೂ ಅವನ ಜೊತೆಗಾರರೂ ಯೇಸುವನ್ನು ಹುಡುಕಿಕೊಂಡು ಹೋದರು. ಅವರನ್ನು ಕಂಡಕೂಡಲೇ, “ಎಲ್ಲರು ತಮ್ಮನ್ನೇ ಹುಡುಕುತ್ತಿದ್ದಾರೆ,” ಎಂದು ತಿಳಿಸಿದರು.
37 : ಅದಕ್ಕೆ ಯೇಸು, “ಅಕ್ಕಪಕ್ಕದ ಊರುಗಳಿಗೆ ಹೋಗೋಣ.
38 : ಅಲ್ಲೂ ನಾನು ಶುಭಸಂದೇಶವನ್ನು ಸಾರಬೇಕು. ನಾನು ಬಂದಿರುವುದು ಈ ಉದ್ದೇಶಕ್ಕಾಗಿಯೇ,” ಎಂದರು.
39 : ಅನಂತರ ಯೇಸು ಗಲಿಲೇಯ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿ ಅಲ್ಲಿನ ಪ್ರಾರ್ಥನಾ ಮಂದಿರಗಳಲ್ಲಿ ಪ್ರಬೋಧಿಸುತ್ತಾ ದೆವ್ವಗಳನ್ನು ಬಿಡಿಸುತ್ತಾ ಬಂದರು. ಕುಷ್ಠರೋಗಿಯ ಮೇಲೆ ಕನಿಕರ (ಮತ್ತಾ. 8.1-4; ಲೂಕ 5.12-16)
40 : ಒಮ್ಮೆ ಕುಷ್ಠರೋಗಿಯೊಬ್ಬನು ಯೇಸುಸ್ವಾಮಿಯ ಬಳಿಗೆ ಬಂದು, ಮೊಣಕಾಲೂರಿ, “ತಾವು ಮನಸ್ಸುಮಾಡಿದ್ದಲ್ಲಿ ನನ್ನನ್ನು ಗುಣ ಮಾಡಬಲ್ಲಿರಿ,” ಎಂದು ದೈನ್ಯದಿಂದ ಬೇಡಿಕೊಂಡನು. ಯೇಸುವಿನ ಮನ ಕರಗಿತು. ಅವರು ಕೈಚಾಚಿ, ಕುಷ್ಠರೋಗಿಯನ್ನು ಮುಟ್ಟಿ,
41 : “ಖಂಡಿತವಾಗಿ ನನಗೆ ಮನಸ್ಸಿದೆ, ನಿನಗೆ ಗುಣವಾಗಲಿ,” ಎಂದರು.
42 : ತಕ್ಷಣ ಅವನ ಕುಷ್ಠವು ಮಾಯವಾಯಿತು. ಅವನು ಗುಣಹೊಂದಿದನು.
43 : ಯೇಸು ಅವನಿಗೆ, “ಎಚ್ಚರಿಕೆ! ನೀನು ಗುಣಹೊಂದಿರುವುದನ್ನು ಯಾರಿಗೂ ಹೇಳಕೂಡದು. ಆದರೆ ನೆಟ್ಟಗೆ ಯಾಜಕನ ಬಳಿಗೆ ಹೋಗು; ಅವನು ನಿನ್ನನ್ನು ಪರೀಕ್ಷಿಸಿ ನೋಡಲಿ. ಅನಂತರ ಮೋಶೆ ನಿಯಮಿಸಿರುವ ಶುದ್ಧೀಕರಣ ವಿಧಿಗಳನ್ನು ಅನುಸರಿಸು. ಇದು ಜನರಿಗೆ ಸಾಕ್ಷಿಯಾಗಿರಲಿ,” ಎಂದು ಎಚ್ಚರಿಸಿ ಅವನನ್ನು ಕೂಡಲೇ ಕಳುಹಿಸಿಬಿಟ್ಟರು.
44 : ಯೇಸು ಅವನಿಗೆ, “ಎಚ್ಚರಿಕೆ! ನೀನು ಗುಣಹೊಂದಿರುವುದನ್ನು ಯಾರಿಗೂ ಹೇಳಕೂಡದು. ಆದರೆ ನೆಟ್ಟಗೆ ಯಾಜಕನ ಬಳಿಗೆ ಹೋಗು; ಅವನು ನಿನ್ನನ್ನು ಪರೀಕ್ಷಿಸಿ ನೋಡಲಿ. ಅನಂತರ ಮೋಶೆ ನಿಯಮಿಸಿರುವ ಶುದ್ಧೀಕರಣ ವಿಧಿಗಳನ್ನು ಅನುಸರಿಸು. ಇದು ಜನರಿಗೆ ಸಾಕ್ಷಿಯಾಗಿರಲಿ,” ಎಂದು ಎಚ್ಚರಿಸಿ ಅವನನ್ನು ಕೂಡಲೇ ಕಳುಹಿಸಿಬಿಟ್ಟರು.
45 : ಆದರೆ ಅವನು ಹೋಗಿ ಈ ಸಮಾಚಾರವನ್ನು ಎಲ್ಲೆಲ್ಲೂ ಸಾರಿದನು. ಈ ಕಾರಣ ಯೇಸು ಬಹಿರಂಗವಾಗಿ ಯಾವ ಪಟ್ಟಣದೊಳಕ್ಕೂ ಹೋಗಲು ಆಗಲಿಲ್ಲ. ಆದುದರಿಂದ ನಿರ್ಜನ ಪ್ರದೇಶಗಳಲ್ಲೇ ಇರತೊಡಗಿದರು. ಆದರೂ ಜನರು ನಾಲ್ದೆಸೆಗಳಿಂದ ಅವರು ಇದ್ದೆಡೆಗೆ ಬರುತ್ತಲೇ ಇದ್ದರು.

Holydivine