Revelation - Chapter 7
Holy Bible

1 : ಇದಾದ ಬಳಿಕ ನಾನು ಮತ್ತೊಂದು ದಿವ್ಯದರ್ಶನವನ್ನು ಕಂಡೆ; ನಾಲ್ಕು ಮಂದಿ ದೇವದೂತರು ಭೂಮಿಯ ನಾಲ್ಕು ದಿಕ್ಕುಗಳಲ್ಲಿ ನಿಂತಿದ್ದರು. ಭೂಮಿಯ ಮೇಲಾಗಲಿ, ಸಮುದ್ರದ ಮೇಲಾಗಲಿ, ಮರಗಳ ಮೇಲಾಗಲಿ, ಗಾಳಿಬೀಸದಂತೆ ಭೂಮಿಯ ನಾಲ್ಕು ದಿಕ್ಕಿನ ಗಾಳಿಯನ್ನು ಅವರು ತಡೆಹಿಡಿದಿದ್ದರು.
2 : ಆಗ ಪೂರ್ವದಿಕ್ಕಿನಿಂದ ಮತ್ತೊಬ್ಬ ದೇವದೂತನು ಏರಿಬಂದನು. ಅವನು ಜೀವಸ್ವರೂಪಿಯಾದ ದೇವರ ಮುದ್ರೆಯನ್ನು ಕೈಯಲ್ಲಿ ಹಿಡಿದಿದ್ದನು. ಅವನು ಭೂಮಿಗೂ ಸಮುದ್ರಕ್ಕೂ ಕೇಡನ್ನು ಮಾಡುವ ಅಧಿಕಾರವನ್ನು ಪಡೆದಿದ್ದ ನಾಲ್ಕು ಮಂದಿ ದೇವದೂತರಿಗೆ:
3 : “ನಮ್ಮ ದೇವರ ದಾಸರಿಗೆ ಹಣೆಯ ಮೇಲೆ ನಾವು ಮುದ್ರೆಯೊತ್ತುವ ತನಕ ಭೂಮಿಗಾಗಲಿ, ಸಮುದ್ರಕ್ಕಾಗಲಿ, ಇಲ್ಲವೇ ಮರಗಳಿಗಾಗಲಿ ಕೇಡನ್ನು ಮಾಡಬೇಡಿ,” ಎಂದು ಗಟ್ಟಿಯಾಗಿ ಕೂಗಿ ಹೇಳಿದನು.
4 : ಮುದ್ರೆಯೊತ್ತಿಸಿಕೊಂಡವರ ಸಂಖ್ಯೆ ನನಗೆ ಕೇಳಿಬಂತು. ಇಸ್ರಯೇಲರು ಪ್ರತಿಯೊಂದು ಕುಲದಲ್ಲಿ ಮುದ್ರೆಯೊತ್ತಿಸಿಕೊಂಡವರು ಒಂದು ಲಕ್ಷದ ನಲವತ್ತ ನಾಲ್ಕು ಸಾವಿರ ಮಂದಿ. ಅವರ ಬಿಡಿ ಸಂಖ್ಯೆ ಹೀಗಿತ್ತು:
5 : ಯೂದನ ಕುಲದಿಂದ ಹನ್ನೆರಡು ಸಾವಿರ ರೂಬೇನನ ಕುಲದಿಂದ ಹನ್ನೆರಡು ಸಾವಿರ ಗಾದನ ಕುಲದಿಂದ ಹನ್ನೆರಡು ಸಾವಿರ
6 : ಅಷೇರನ ಕುಲದಿಂದ ಹನ್ನೆರಡು ಸಾವಿರ ನೆಫ್ತಲೀಮನ ಕುಲದಿಂದ ಹನ್ನೆರಡು ಸಾವಿರ ಮನಸ್ಸೆಯ ಕುಲದಿಂದ ಹನ್ನೆರಡು ಸಾವಿರ
9 : ಇದಾದ ಬಳಿಕ ನಾನು ಇನ್ನೊಂದು ದಿವ್ಯದರ್ಶನವನ್ನು ಕಂಡೆ: ಯಾರಿಂದಲೂ ಎಣಿಸಲಾಗದಷ್ಟು ಒಂದು ದೊಡ್ಡ ಜನಸಮೂಹವು ನೆರೆದಿತ್ತು. ಅವರು ಎಲ್ಲಾ ದೇಶ, ಭಾಷೆ, ಕುಲ, ಗೋತ್ರಗಳಿಂದ ಬಂದವರಾಗಿದ್ದರು. ಶ್ವೇತಾಂಬರರಾಗಿ ಸಿಂಹಾಸನದ ಮತ್ತು ಯಜ್ಞದ ಕುರಿಮರಿಯಾದಾತನ ಸಾನ್ನಿಧ್ಯದಲ್ಲಿ ನಿಂತಿದ್ದರು. ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದಿದ್ದರು.
10 : ಅವರು ಗಟ್ಟಿಯಾದ ಧ್ವನಿಯಿಂದ: “ಸಿಂಹಾಸನಾರೂಢರಾದ ದೇವರಿಂದ, ಬಲಿಯರ್ಪಿತರಾದ ಯಜ್ಞದ ಕುರಿಮರಿಯಿಂದ ಲಭಿಸುತ್ತದೆಮಗೆ ಜೀವೋದ್ಧಾರ,” ಎಂದು ಹಾಡಿದರು.
11 : ಆಗ ಸಭಾಪ್ರಮುಖರ ಮತ್ತು ನಾಲ್ಕು ಜೀವಿಗಳ ಸಮೇತ ದೇವದೂತರೆಲ್ಲರೂ ಸಿಂಹಾಸನದ ಸುತ್ತಲೂ ನಿಂತಿದ್ದರು. ಅವರೆಲ್ಲರೂ ಸಿಂಹಾಸನದ ಮುಂದೆ ಸಾಷ್ಟಾಂಗ ನಮಸ್ಕಾರ ಮಾಡಿ,
12 : “ಆಮೆನ್, ಸ್ತುತಿಸ್ತೋತ್ರವೂ ಘನಮಾನವೂ ಜ್ಞಾನವೂ ಧನ್ಯವಾದವೂ ಶಕ್ತಿಯೂ ಪರಾಕ್ರಮವೂ ಸಲ್ಲಲಿ ಯುಗಯುಗಾಂತರಕ್ಕೂ ಆಮೆನ್,” ಎಂದು ಹಾಡುತ್ತಾ ದೇವರನ್ನು ಆರಾಧಿಸಿದರು.
13 : ಸಭಾಪ್ರಮುಖರಲ್ಲಿ ಒಬ್ಬನು, “ಶ್ವೇತಾಂಬರರಾದ ಇವರೆಲ್ಲರೂ ಯಾರು? ಎಲ್ಲಿಂದ ಬಂದರು?” ಎಂದು ನನ್ನನ್ನು ಪ್ರಶ್ನಿಸಿದನು.
14 : ಅದಕ್ಕೆ ನಾನು, “ಸ್ವಾವಿೂ ನೀವೇ ಬಲ್ಲಿರಿ”, ಎಂದು ಉತ್ತರಕೊಟ್ಟೆ. ಆಗ ಆತನು ನನಗೆ ಹೀಗೆಂದನು: “ಇವರು ಆ ಭೀಕರ ಹಿಂಸೆ ಬಾಧೆಯನ್ನು ಅನುಭವಿಸಿ ಬಂದವರು. ತಮ್ಮ ನಿಲುವಂಗಿಗಳನ್ನು ಯಜ್ಞದ ಕುರಿಮರಿಯ ರಕ್ತದಿಂದ ತೊಳೆದು ಬಿಳುಪಾಗಿಸಿಕೊಂಡಿದ್ದಾರೆ.
15 : ‘ಇರುವರು ದೇವರ ಸಿಂಹಾಸನದ ಸಮ್ಮುಖದಲ್ಲೇ ಆರಾಧಿಪರಾತನನು ಹಗಲಿರುಳು ದೇವಾಲಯದಲ್ಲೇ ಸಂರಕ್ಷಿಪನಾತನು ಅವರನ್ನು ಗುಡಾರದಂತೆ.
16 : ಇನ್ನಿರದು ಅವರಿಗೆ ಹಸಿವು ಬಾಯಾರಿಕೆ ತಟ್ಟದವರನು ಬಿಸಿಲಿನ ತಾಪ, ಸೂರ್ಯನ ಕೋಪ.
17 : ನಿಂತಿಹನು ಕುರಿಮರಿಯಾದಾತನು ಸಿಂಹಾಸನದ ನಡುವೆ ಕಾಯುವನು ಅವರುಗಳನು ಕುರುಬನಂತೆ ನಡೆಸುವನು ಅವರನು ಜೀವಜಲದ ಒರತೆಗಳ ಬಳಿಗೆ ದೇವನೊರಸುವನು ಅವರ ಕಂಬನಿಗಳನು ಬಿಡದೆ’,” ಎಂದು ನನಗೆ ತಿಳಿಸಿದನು.

Holydivine