Mathew - Chapter 7
Holy Bible

1 : "ನೀವು ಇತರರ ಬಗ್ಗೆ ತೀರ್ಪುಕೊಡಬೇಡಿ; ಆಗ ದೇವರು ನಿಮ್ಮ ಬಗ್ಗೆ ತೀರ್ಪುಕೊಡುವುದಿಲ್ಲ.
2 : ನೀವು ಇತರರ ಬಗ್ಗೆ ಕೊಡುವ ತೀರ್ಪಿಗೆ ಅನುಗುಣವಾಗಿಯೇ ದೇವರು ನಿಮಗೂ ತೀರ್ಪುಕೊಡುವರು. ಇತರರಿಗೆ ನೀವು ಕೊಟ್ಟ ಅಳತೆಯಲ್ಲೇ ದೇವರು ನಿಮಗೂ ಅಳೆದು ಕೊಡುವರು.
3 : ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನು ನೋಡದೆ ನಿನ್ನ ಸೋದರನ ಕಣ್ಣಿನಲ್ಲಿರುವ ಅಣುವನ್ನು ನೀನು ಗಮನಿಸುವುದೇಕೆ?
4 : ನಿನ್ನ ಕಣ್ಣಿನಲ್ಲಿ ಒಂದು ದಿಮ್ಮಿಯೇ ಇರುವಾಗ, "ತಾಳು, ನಿನ್ನ ಕಣ್ಣಿನಲ್ಲಿರುವ ಅಣುವನ್ನು ತೆಗೆದು ಬಿಡುತ್ತೇನೆ," ಎಂದು ನಿನ್ನ ಸೋದರನಿಗೆ ಹೇಗೆ ಹೇಳಬಲ್ಲೆ?
5 : ಎಲೈ ಕಟಟಿಯೇ, ಮೊದಲು ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನು ತೆಗೆದುಹಾಕು. ಅನಂತರ ನಿನ್ನ ಸೋದರನ ಕಣ್ಣಿನಿಂದ ಅಣುವನ್ನು ತೆಗೆಯಲು ನಿನ್ನ ಕಣ್ಣು ನಿಚ್ಚಳವಾಗಿ ಕಾಣಿಸುವುದು."
6 : "ಪವಿತ್ರವಾದುದನ್ನು ನಾಯಿಗಳಿಗೆ ಹಾಕಬೇಡಿ - ಅವು ನಿಮ್ಮ ಮೇಲೆ ತಿರುಗಿಬಿದ್ದು ನಿಮ್ಮನ್ನು ಸೀಳಿಬಿಟ್ಟಾವು; ಮುತ್ತುಗಳನ್ನು ಹಂದಿಗಳ ಮುಂದೆ ಚೆಲ್ಲಬೇಡಿ - ಅವು ಆ ಮುತ್ತುಗಳನ್ನು ಕಾಲಿನಿಂದ ತುಳಿದು ಹಾಕಿಯಾವು."
7 : "ಕೇಳಿರಿ, ನಿಮಗೆ ಕೊಡಲಾಗುವುದು; ಹುಡುಕಿರಿ, ನಿಮಗೆ ಸಿಗುವುದು; ತಟ್ಟಿರಿ, ನಿಮಗೆ ಬಾಗಿಲು ತೆರೆಯಲಾಗುವುದು.
8 : ಏಕೆಂದರೆ ಕೇಳಿಕೊಳ್ಳುವ ಪ್ರತಿಯೊಬ್ಬನಿಗೂ ಕೊಡಲಾಗುವುದು, ಹುಡುಕುವವನಿಗೆ ಸಿಗುವುದು, ತಟ್ಟುವವನಿಗೆ ಬಾಗಿಲು ತೆರೆಯಲಾಗುವುದು.
9 : ನಿಮ್ಮಲ್ಲಿ ಯಾವನು ತಾನೇ ತನ್ನ ಮಗ ರೊಟ್ಟಿಯನ್ನು ಕೇಳಿದರೆ ಕಲ್ಲನ್ನು ಕೊಟ್ಟಾನು?
10 : ವಿೂನನ್ನು ಕೇಳಿದರೆ ಹಾವನ್ನು ಕೊಟ್ಟಾನು?
11 : ಕೆಟ್ಟವರಾದ ನೀವೇ ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡಬಲ್ಲವರಾದರೆ, ಅದಕ್ಕಿಂತಲೂ ಎಷ್ಟೋ ಹೆಚ್ಚಾಗಿ ಸ್ವರ್ಗದಲ್ಲಿರುವ ನಿಮ್ಮ ತಂದೆ ತಮ್ಮನ್ನು ಕೇಳಿಕೊಳ್ಳುವವರಿಗೆ ಒಳ್ಳೆಯ ಕೊಡುಗೆಗಳನ್ನು ಕೊಡಬಲ್ಲರು!" ಸುವರ್ಣ ಸೂತ್ರ
12 : "ಜನರು ನಿಮಗೆ ಏನೇನು ಮಾಡಬೇಕೆಂದು ನೀವು ಅಪೇಕ್ಷಿಸುತ್ತೀರೋ, ಅದನ್ನೇ ನೀವು ಅವರಿಗೆ ಮಾಡಿ. ಧರ್ಮಶಾಸ್ತ್ರದ ಹಾಗೂ ಪ್ರವಾದನೆಗಳ ಸಾರ ಇದೇ." ವಿನಾಶಕ್ಕೆ ಒಯ್ಯುವ ವೀದಿ ವಿಶಾಲ (ಲೂಕ 13:24)
13 : "ಕಿರಿದಾದ ಬಾಗಿಲಿನಿಂದಲೇ ಒಳಕ್ಕೆ ಹೋಗಿರಿ. ಏಕೆಂದರೆ ವಿನಾಶಕ್ಕೆ ಒಯ್ಯುವ ಬಾಗಿಲು ಹಿರಿದು; ಅದರ ಮಾರ್ಗ ಸರಾಗ; ಅದನ್ನು ಹಿಡಿಯುವವರು ಅನೇಕರು.
14 : ಅಮರ ಜೀವಕ್ಕೆ ಕೊಂಡೊಯ್ಯುವ ಮಾರ್ಗ ದುರ್ಭರ; ಅದರ ಬಾಗಿಲು ಕಿರಿದು; ಅದನ್ನು ಗುರುತಿಸುವವರೋ ಕೆಲವರು." ಸುಳ್ಳು ಪ್ರವಾದಿಗಳಿದ್ದಾರೆ, ಜಾಗ್ರತೆ! (ಲೂಕ 6:43-44)
15 : "ಸುಳ್ಳು ಪ್ರವಾದಿಗಳ ಬಗ್ಗೆ ಎಚ್ಚರಿಕೆಯಿಂದಿರಿ. ಹೊರಗೆ ಕುರಿಯ ವೇಷದಲ್ಲಿ ಬಂದರೂ ಒಳಗೆ ಅವರು ಕಿತ್ತುತಿನ್ನುವ ತೋಳಗಳು.
16 : ಅವರ ವರ್ತನೆಯಿಂದ ನೀವು ಅವರನ್ನು ಗುರುತು ಹಚ್ಚುವಿರಿ. ಮುಳ್ಳುಕಳ್ಳಿಯಲ್ಲಿ ದ್ರಾಕ್ಷಿ ಕೊಯ್ಯುವುದುಂಟೇ? ಮದ್ದುಗುಣಿಕೆಯಲ್ಲಿ ಅಂಜೂರ ಕೀಳುವುದುಂಟೇ?
17 : ಅದರಂತೆಯೇ ಒಳ್ಳೆಯ ಮರ ಒಳ್ಳೆಯ ಹಣ್ಣನ್ನೂ ಕೆಟ್ಟ ಮರವು ಕೆಟ್ಟ ಹಣ್ಣನ್ನೂ ಕೊಡುತ್ತದೆ.
18 : ಒಳ್ಳೆಯ ಮರ ಕೆಟ್ಟ ಹಣ್ಣನ್ನು ಕೊಡಲಾರದು, ಹಾಗೆಯೇ ಕೆಟ್ಟ ಮರ ಒಳ್ಳೆಯ ಹಣ್ಣನ್ನು ಕೊಡಲಾರದು.
19 : ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನೂ ಕಡಿದು ಬೆಂಕಿಯಲ್ಲಿ ಹಾಕಲಾಗುವುದು.
20 : ಆದ್ದರಿಂದ ಸುಳ್ಳು ಪ್ರವಾದಿಗಳನ್ನು ಅವರ ನಡತೆಯಿಂದ ಗುರುತುಹಚ್ಚುವಿರಿ." ನುಡಿದಂತೆ ನಡೆ (ಲೂಕ 13:25-27)
21 : "ನನ್ನನ್ನು "ಸ್ವಾವಿೂ, ಸ್ವಾವಿೂ," ಎನ್ನುವ ಪ್ರತಿಯೊಬ್ಬನೂ ಸ್ವರ್ಗಸಾಮ್ರಾಜ್ಯವನ್ನು ಪ್ರವೇಶಿಸನು. ಸ್ವರ್ಗದಲ್ಲಿರುವ ನನ್ನ ತಂದೆಯ ಚಿತ್ತಾನುಸಾರ ನಡೆಯುವವನು ಮಾತ್ರ ಅದನ್ನು ಪ್ರವೇಶಿಸುವನು.
22 : ತೀರ್ಪಿನ ದಿನದಂದು, "ಸ್ವಾವಿೂ, ಸ್ವಾವಿೂ, ನಿಮ್ಮ ಹೆಸರಿನಲ್ಲಿ ನಾವು ಪ್ರವಾದನೆ ಮಾಡಲಿಲ್ಲವೇ? ನಿಮ್ಮ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೇ? ನಿಮ್ಮ ಹೆಸರಿನಲ್ಲಿ ಹಲವಾರು ಮಹತ್ಕಾರ್ಯಗಳನ್ನು ಮಾಡಲಿಲ್ಲವೇ?" ಎಂದು ಅನೇಕರು ನನಗೆ ಹೇಳುವರು.
23 : ಆಗ ನಾನು ಅವರಿಗೆ ‘ಇಂದಿಗೂ ನಿಮ್ಮ ಗುರುತೇ ನನಗಿಲ್ಲ. ಅಧರ್ಮಿಗಳೇ, ನನ್ನಿಂದ ತೊಲಗಿರಿ,’ ಎಂದು ಬಹಿರಂಗವಾಗಿ ಹೇಳಿಬಿಡುವೆನು." ಉಸುಬು ಮೇಲಿನ ಮನೆ ಕುಸಿದು ಬಿತ್ತು (ಲೂಕ 6:47-49)
24 : "ನನ್ನ ಈ ಮಾತನ್ನು ಕೇಳಿ ಅದರಂತೆ ನಡೆಯುವ ಪ್ರತಿಯೊಬ್ಬನೂ ಬಂಡೆಯ ಮೇಲೆ ಮನೆ ಕಟ್ಟಿಕೊಂಡ ಬುದ್ದಿವಂತನನ್ನು ಹೋಲುತ್ತಾನೆ.
25 : ಮಳೆ ಬಿತ್ತು, ನೆರೆ ಬಂತು, ಗಾಳಿ ಬೀಸಿ ಆ ಮನೆಗೆ ಅಪ್ಪಳಿಸಿತು. ಆದರೂ ಅದು ಬೀಳಲಿಲ್ಲ. ಕಾರಣ ಅದರ ಅಡಿಗಟ್ಟು ಬಂಡೆಯ ಮೇಲಿತ್ತು.
26 : ನನ್ನ ಈ ಮಾತುಗಳನ್ನು ಕೇಳಿಯೂ ಅದರಂತೆ ನಡೆಯದ ಪ್ರತಿಯೊಬ್ಬನೂ ಮರಳಿನ ಮೇಲೆ ಮನೆ ಕಟ್ಟಿಕೊಂಡ ಬುದ್ದಿಹೀನನನ್ನು ಹೋಲುತ್ತಾನೆ.
27 : ಮಳೆ ಬಿತ್ತು, ನೆರೆ ಬಂತು, ಗಾಳಿ ಬೀಸಿ ಆ ಮನೆಗೆ ಅಪ್ಪಳಿಸಿತು; ಅದು ಕುಸಿದು ಬಿತ್ತು. ಅದಕ್ಕಾದ ಪತನವೋ ಅಗಾಧ!" ಬೋಧನೆಯ ಪ್ರಭಾವ
28 : ಯೇಸುಸ್ವಾಮಿ ಇದೆಲ್ಲವನ್ನು ಹೇಳಿ ಮುಗಿಸಿದರು. ಅವರ ಬೋಧನೆ ಜನರಲ್ಲಿ ಅಮೋಘ ಪ್ರಭಾವವನ್ನು ಬೀರಿತು.
29 ಏಕೆಂದರೆ, ಅವರ ಧರ್ಮಶಾಸ್ತ್ರಿಗಳಂತೆ ಬೋಧಿಸದೆ ಯೇಸು ಅಧಿಕಾರ ವಾಣಿಯಿಂದ ಪ್ರಬೋಧಿಸುತ್ತಿದ್ದರು.

Holydivine